ಬೆಂಗಳೂರು: ಆಸ್ತಿ ಖರೀದಿ, ನೋಂದಣಿದಾರರಿಗೆ ಅನುಕೂಲವಾಗುವಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಚೇರಿಗಳ ಕೆಲಸದ ವೇಳೆಯನ್ನು ವಿಸ್ತರಿಸಲಾಗಿದೆ.
ನೋಂದಣಿ ಕಚೇರಿಗಳು ಪ್ರಸ್ತುತ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಕಾರ್ಯನಿರ್ವಹಿಸುತ್ತಿವೆ. ಕಚೇರಿಗಳಲ್ಲಿನ ಜನಸಂದಣಿ ಗಮನಿಸಿ ಕಚೇರಿ ವೇಳೆಯನ್ನು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಅದೇ ರೀತಿ ಉಪ ನೋಂದಣಾಧಿಕಾರಿಗಳ ಕಚೇರಿ ಕೆಲಸದ ಸಮಯವನ್ನು ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ನಿಗದಿಪಡಿಸಲಾಗಿದೆ. ನೋಂದಣಿ ಮತ್ತು ಉಪನೋಂದಣಿ ಕಚೇರಿಗಳು ಸಮಯಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಮುದ್ರಾಂಕ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.