ಬೆಂಗಳೂರು: ಬೈಕ್ ಟಚ್ ಆಗಿದ್ದಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಯುವಕನ ಹತ್ಯೆ ವಿಚಾರ ಇದೀಗ ಮತೀಯ ತಿರುವು ಪಡೆದುಕೊಂಡಿದೆ. ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ರಾತ್ರಿ ನಡೆದ ಚಂದ್ರು ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್ ಮಾಡಿದ್ದು, ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯಕ್ಕೆ ಗಲಾಟೆ ಆರಂಭವಾಗಿ ಕೊಲೆ ನಡೆದಿದೆ ಎಂದು ತಿಳಿಸಿದ್ದಾರೆ.
ಹಾಲಿನ ದರ ಮತ್ತಷ್ಟು ಏರಿಕೆಯಾಗಲಿದೆಯೇ? ಅಮುಲ್ ಎಂಡಿ ಹೇಳೋದೇನು?
ಈ ಗಲಾಟೆಗೆ ಇತರರು ಸೇರಿಕೊಂಡಿದ್ದಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿದ್ದಾನೆ. ಗಾಯಾಳು ಚಂದ್ರುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ ಹಾಗೂ ತನಿಖೆ ಮುಂದುವರೆದಿದೆ ಎಂದು ಹೇಳಿದ್ದಾರೆ.
ಚಂದ್ರು ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಯುವಕನಿಗೆ ದುಷ್ಕರ್ಮಿಗಳು ಉರ್ದು ಮಾತನಾಡಲು ಹೇಳಿದ್ದಾರೆ. ಯುವಕ ಕನ್ನಡ ಭಾಷೆ ಬಿಟ್ಟು ಬೇರೆ ಮಾತನಾಡಲು ಬರಲ್ಲ ಎಂದಿದ್ದಾನೆ. ಇದೇ ಕಾರಣಕ್ಕೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.