ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಗ್ರೀನ್ ಸಿಗ್ನಲ್ ನೀಡಿದೆ.
ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದು, ಈ ವೇಳೆ ಸಚಿವ ಸಂಪುಟ ವಿಚಾರವಾಗಿ ವರಿಷ್ಠರು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಹಾಲಿನ ದರ ಮತ್ತಷ್ಟು ಏರಿಕೆಯಾಗಲಿದೆಯೇ? ಅಮುಲ್ ಎಂಡಿ ಹೇಳೋದೇನು?
ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎಂಬ ಬಗ್ಗೆ ನೀವೇ ನಿರ್ಧಾರ ಕೈಗೊಳ್ಳಿ ಹಾಗೂ ಸಂಪುಟಕ್ಕೆ ಯಾರನ್ನೆಲ್ಲಾ ಸೇರಿಸಿಕೊಳ್ಳಬೇಕು ಎಂಬ ಬಗ್ಗೆಯೂ ನೀವೆ ಮಾಹಿತಿ ನೀಡಿ ಎಂದು ನಡ್ಡಾ ಅವರು ಸಿಎಂ ಬೊಮ್ಮಾಯಿ ಹೆಗಲಿಗೆ ಜವಾಬ್ದಾರಿ ಹೊರಿಸಿದ್ದಾರೆ ಎನ್ನಲಾಗಿದೆ.