ಬೆಂಗಳೂರು: ಅಡುಗೆ ಎಣ್ಣೆ, ಅಡುಗೆ ಅನಿಲ, ವಿದ್ಯುತ್, ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ದರ ಏರಿಕೆ ಹೊತ್ತಲ್ಲೇ ಹಾಲಿನ ದರ ಕೂಡ ಹೆಚ್ಚಳ ಮಾಡಲು ಚಿಂತನೆ ನಡೆದಿದೆ.
ಪ್ರತಿ ಲೀಟರ್ ಹಾಲಿನ ದರವನ್ನು 5 ರೂಪಾಯಿ ಹೆಚ್ಚಳ ಮಾಡುವಂತೆ ಹಾಲು ಒಕ್ಕೂಟಗಳಿಂದ ಕೆಎಂಎಫ್ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ, ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡಲು ಸರ್ಕಾರ ಒಪ್ಪುವ ಸಾಧ್ಯತೆ ಇಲ್ಲ. ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಳ ಮಾಡಲು ಸರ್ಕಾರ ಉದ್ದೇಶಿಸಿದೆ.
ಕೆಎಂಎಫ್ ನಂದಿನಿ ಹಾಲಿನ ದರವನ್ನು ಲೀಟರ್ ಗೆ 2 ರೂ ನಷ್ಟ ಹೆಚ್ಚಳ ಮಾಡುವ ಸಾಧ್ಯತೆ ಇದ್ದು, ಎಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರ ನಿಯೋಗದೊಂದಿಗೆ ಕೆಎಂಎಫ್ ಅಧ್ಯಕ್ಷರು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಹಾಲಿನ ದರ ಏರಿಕೆ ಪ್ರಸ್ತಾವನೆ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.