ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಜಾಮಿ ಯಲ್ಲಮ್ಮ ದೇವಸ್ಥಾನದಿಂದ ಕಳ್ಳನೊಬ್ಬ 9 ಗ್ರಾಂ ಬೆಳ್ಳಿ ಸಾಮಗ್ರಿಗಳ ಸಮೇತ ಪರಾರಿಯಾಗುತ್ತಿದ್ದ ವೇಳೆಯಲ್ಲಿ ಗೋಡೆಯ ರಂಧ್ರದಲ್ಲಿ ಸಿಲುಕಿಕೊಂಡ ಘಟನೆ ವರದಿಯಾಗಿದೆ.
ಕಳ್ಳನ ವಿರುದ್ಧ ಕಂಚಿಲಿ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಈ ವಿಚಾರವಾಗಿ ಮಾಹಿತಿ ನೀಡಿದ ಕಂಚಿಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್ಪೆಕ್ಟರ್ ಚಿರಂಜೀವಿ, ಶ್ರೀಕಾಕುಳಂ ಜಿಲ್ಲೆಯ ಜಾಮಿ ಯಲ್ಲಮ್ಮ ದೇವಸ್ಥಾನದಲ್ಲಿ ಪಾಪಾ ರಾವ್ ಎಂಬಾತ 9 ಗ್ರಾಂ ಬೆಳ್ಳಿಯನ್ನು ಕದ್ದೊಯ್ದಿದ್ದಾನೆ, ದೇವಸ್ಥಾನದ ಆವರಣದಲ್ಲಿ ಗೋಡೆಗೆ ರಂಧ್ರ ಮಾಡಿ ಅದರಿಂದ ದೇವಸ್ಥಾನದ ಒಳಗೆ ಪ್ರವೇಶಿಸಿ ವಾಪಸ್ ತೆರಳುವ ವೇಳೆಯಲ್ಲಿ ತಾನೇ ಕೊರೆದಿದ್ದ ರಂಧ್ರದಲ್ಲಿ ಸಿಲುಕಿ ಹಾಕಿಕೊಂಡಿದ್ದಾನೆ. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಈತನನ್ನು ಬಂಧಿಸಲಾಗಿದೆ ಎಂದು ಹೇಳಿದರು.