ಮುಂಬೈ: ಎಕ್ಸ್ ಇ ಎಂಬ ಕೊರೊನಾ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಎಕ್ಸ್ ಇ ಪ್ರಭೇದ ದೃಢಪಡಿಸುವ ವರದಿ ಬಂದಿಲ್ಲ. ಆರೋಗ್ಯ ಇಲಾಖೆಯ ಹೊಸ ತಳಿ ಪತ್ತೆಯಾಗಿರುವ ಬಗ್ಗೆ ಯಾವುದೇ ದೃಢೀಕರಣವನ್ನು ಸ್ವೀಕರಿಸಿಲ್ಲ. ಹೀಗಾಗಿ ಎಕ್ಸ್ ಇ ಹೊಸತಳಿ ಪತ್ತೆಯಾಗಿರುವುದು ಕಂಡುಬಂದಿಲ್ಲ ಎಂದು ಹೇಳಿದರು.
ಬೆಚ್ಚಿಬೀಳಿಸುವಂತಿದೆ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿ ಬಳಸಿದ ತಂತ್ರ….!
ಎಕ್ಸ್ ಇ ಪ್ರಭೇದ ಒಮಿಕ್ರಾನ್ ಗಿಂತ 10 ಪಟ್ಟು ವೇಗವಾಗಿ ಹರಡುತ್ತದೆ. ಹೀಗಾಗಿ ಈ ಬಗ್ಗೆ ಎನ್ ಐ ಬಿ ವರದಿ ಬಂದ ಬಳಿಕ ಹೆಚ್ಚಿನ ವಿವರಣೆ ನೀಡುತ್ತೇನೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವರು ಹೇಳಿದ್ದಾರೆ.
ಮುಂಬೈನಲ್ಲಿ ಎಕ್ಸ್ ಇ ಎಂಬ ಕೊರೊನಾ ಹೊಸ ತಳಿ ಪತ್ತೆಯಾಗಿದೆ ಎಂದು ವರದಿ ಪ್ರಸಾರವಾಗಿತ್ತು. ಈ ಬಗ್ಗೆ ಕೇಂದ್ರ ಸರ್ಕಾರದ ಅಧಿಕಾರಿಗಳು ಕೂಡ ಸ್ಪಷ್ಟನೆ ನೀಡಿದ್ದು, ಎಕ್ಸ್ ಇ ತಳಿ ಪತ್ತೆಯಾಗಿರುವುದಕ್ಕೆ ವೈಜ್ಞಾನಿಕ ಪುರಾವೆಗಳಿಲ್ಲ ಎಂದಿದ್ದಾರೆ.