ಉತ್ತರ ಪ್ರದೇಶದ ಗೃಹರಕ್ಷಕ ದಳ ಮತ್ತು ಕಾರಾಗೃಹ ಇಲಾಖೆ ಸಚಿವ ಧರಂವೀರ್ ಪ್ರಜಾಪತಿ ಅವರು ಇಲಾಖೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮಡಕೆಗಳನ್ನು ಪರ್ಯಾಯವಾಗಿ ಬಳಸಿಕೊಳ್ಳುವಂತೆ ಹೇಳಿದರು. ಪರಿಸರ ಮತ್ತು ಆರೋಗ್ಯ ಸಂಬಂಧಿ ಕಾರಣಗಳಿಂದ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಇದರ ಜೊತೆಗೆ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯಿಂದ ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳು ಬರಬಹುದು ಆದ್ದರಿಂದ ಇದರ ಬಳಕೆಯನ್ನು ತಪ್ಪಿಸಬೇಕು ಎಂದು ಅವರು ಹೇಳಿದರು.