ಪಾಕಿಸ್ತಾನದಲ್ಲಿ 90 ದಿನಗಳಲ್ಲಿ ಕ್ಷಿಪ್ರ ಚುನಾವಣೆ ನಡೆಸಲು ಸಾಧ್ಯವಿಲ್ಲ, 7 ತಿಂಗಳು ಬೇಕು ಎಂದು ಚುನಾವಣಾ ಸಮಿತಿ ತಿಳಿಸಿದೆ.
ಪಾಕಿಸ್ತಾನವು ಸಾಂವಿಧಾನಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವಾಗ, ಪಾಕಿಸ್ತಾನದ ಚುನಾವಣಾ ಆಯೋಗವು(ECP) ಗುರುವಾರ ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು ಅಕ್ಟೋಬರ್ 2022 ರ ಮೊದಲು ನಡೆಸಲಾಗುವುದಿಲ್ಲ ಎಂದು ಹೇಳಿದೆ. ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು 7 ತಿಂಗಳ ಅಗತ್ಯವಿದೆ ಎಂದು ಚುನಾವಣಾ ಸಮಿತಿ ಹೇಳಿದೆ.
ಅಧ್ಯಕ್ಷ ಆರಿಫ್ ಅಲ್ವಿ ಅವರಿಗೆ ಪತ್ರ ಬರೆದಿರುವ ಚುನಾವಣಾ ಸಂಸ್ಥೆಯು 90 ದಿನಗಳಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು ಆಯೋಜಿಸುವುದರ ಜೊತೆಗೆ ಡಿಲಿಮಿಟೇಶನ್ ಪೂರ್ಣಗೊಳಿಸಲು ನಾಲ್ಕು ತಿಂಗಳ ಅಗತ್ಯವಿದೆ ಎಂದು ಹೇಳಿದೆ.
ಕಳೆದ ಭಾನುವಾರ ಇಮ್ರಾನ್ ಖಾನ್ ನೇತೃತ್ವದ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಡೆಪ್ಯೂಟಿ ಸ್ಪೀಕರ್ ಖಾಸಿಂ ಸೂರಿ ತಿರಸ್ಕರಿಸಿದ ನಂತರ ಅಧ್ಯಕ್ಷರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದರಿಂದ ದೇಶದಲ್ಲಿ ರಾಜಕೀಯ ಪ್ರಕ್ಷುಬ್ಧತೆಯು ಸಾಂವಿಧಾನಿಕ ಬಿಕ್ಕಟ್ಟಿಗೆ ತಿರುಗಿದೆ.