ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಮತ್ತೆ ಸಾವಿರಕ್ಕೂ ಹೆಚ್ಚು ಕೋವಿಡ್ ಕೇಸ್ ಗಳು ಪತ್ತೆಯಾಗಿದ್ದು, 1,109 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ.
24 ಗಂಟೆಯಲ್ಲಿ ಮತ್ತೆ 43 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 521573ಕ್ಕೆ ಏರಿಕೆಯಾಗಿದೆ.
ಶಿಕ್ಷಕರಿಗೆ ಮತ್ತೆ ಶಾಕ್: ವರ್ಗಾವಣೆಗೆ KSAT ತಡೆ, ಮರು ಕೌನ್ಸೆಲಿಂಗ್ ಮೂಲಕ ಪುನಃ ವರ್ಗಾವಣೆಗೆ ಸೂಚನೆ
ಇನ್ನು ದೇಶದಲ್ಲಿ 11492 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1213 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42500002 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 16,80,118 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,85,38,88,663 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,53,582 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.