ಓಲಾ ಬಿಡುಗಡೆ ಮಾಡಿದ ಇ-ಸ್ಕೂಟರ್‌ಗೆ ಪುಣೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಸರ್ಕಾರ ಕಳೆದ ತಿಂಗಳು ಈ ಬಗ್ಗೆ ತನಿಖೆಗೆ ಆದೇಶಿಸಿತ್ತು. ಈ ಘಟನೆ ಬಗ್ಗೆ ಸರ್ಕಾರವು ಓಲಾ ಎಲೆಕ್ಟ್ರಿಕ್ ಬಳಿಯಲ್ಲಿ ವಿವರ ಕೇಳಬಹುದು ಎಂದು ಸರ್ಕಾರದ ಹಿರಿಯ ಅಧಿಕಾರಿ ನಿನ್ನೆ ಮಾಹಿತಿ ನೀಡಿದ್ದಾರೆ.
ಅವಶ್ಯಕತೆ ಬಿದ್ದಲ್ಲಿ ಘಟನೆಯ ಬಗ್ಗೆ ವಿವರಿಸಲು ಸರ್ಕಾರವು ಓಲಾ ಎಲೆಕ್ಟ್ರಿಕ್ನ್ನು ಕೇಳಬಹುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಗಿರಿಧರ್ ಅರಮನೆ ತಿಳಿಸಿದ್ದಾರೆ. ರಸ್ತೆ ಸಾರಿಗೆ ಸಚಿವಾಲಯದ ಪ್ರಕಾರ ಘಟನೆಗೆ ಕಾರಣವಾದ ಸಂದರ್ಭಗಳನ್ನು ತನಿಖೆ ಮಾಡಲು ಮತ್ತು ಪರಿಹಾರ ಕ್ರಮಗಳನ್ನು ಸೂಚಿಸಲು CFEES ನ್ನು ಕೇಳಲಾಗಿದೆ .
ತನಿಖೆಯ ಜೊತೆಯಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ತನ್ನ ಸಲಹೆಗಳನ್ನು ಹಂಚಿಕೊಳ್ಳುವಂತೆಯೂ ಕೇಂದ್ರವು CFEESನ್ನು ಕೇಳಿದೆ. ಇ ಸ್ಕೂಟರ್ ಬೆಂಕಿಯ ಕೆನ್ನಾಲಿಗೆಯಲ್ಲಿ ಆಹುತಿಯಾದ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ವೈರಲ್ ಆದ ಬಳಿಕ ಈ ಘಟನೆಯು ಬೆಳಕಿಗೆ ಬಂದಿತ್ತು.