ಬೆಂಗಳೂರು: ಬೆಂಗಳೂರಿನಲ್ಲಿ ಫ್ಯಾನ್ ಗೆ ನೇಣುಹಾಕಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿವಿಪುರಂ ಹಾಸ್ಟೆಲ್ ಕೊಠಡಿಯಲ್ಲಿ 19 ವರ್ಷದ ಪ್ರಮೋದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ಮೂಲದ ಪ್ರಮೋದ್ ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿವಿ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.