ಇಸ್ಲಾಮಾಬಾದ್: ವಿಶ್ವಾಸ ಮತಯಾಚನೆಗೆ ಮುನ್ನವೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.
ಇಂದು ರಾತ್ರಿ ಪ್ರಧಾನಿ ಹುದ್ದೆಗೆ ಇಮ್ರಾನ್ ಖಾನ್ ರಾಜೀನಾಮೆ ಸಲ್ಲಿಸಬಹುದು. ರಾತ್ರಿ 9.30 ಕ್ಕೆ ಅವರು ಸಂಪುಟ ಸಭೆಯನ್ನು ಕರೆದಿದ್ದು, ಸಭೆಯ ನಂತರ ಅಧಿಕೃತವಾಗಿ ರಾಜೀನಾಮೆ ನೀಡುವ ಬಗ್ಗೆ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.
ಸುಪ್ರೀಂ ಕೋರ್ಟ್ ತಾಕೀತು ಮಾಡಿದ ಹಿನ್ನಲೆಯಲ್ಲಿ ಇಂದು ಇಮ್ರಾನ್ ಖಾನ್ ವಿಶ್ವಾಸಮತ ಯಾಚನೆ ಮಾಡಬೇಕಿತ್ತು. ಆದರೆ, ರಾಜಕೀಯ ಪರಿಸ್ಥಿತಿ ವ್ಯತಿರಿಕ್ತವಾಗಿರುವುದರಿಂದ ಅವರು ವಿಶ್ವಾಸಮತ ಯಾಚನೆಗೆ ಮೊದಲೇ ರಾಜೀನಾಮೆ ನೀಡಲಿದ್ದಾರೆನ್ನಲಾಗಿದೆ.