ಪುಣೆ: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಜಯಗಳಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಮೂರನೇ ಜಯ ದಾಖಲಿಸಿದೆ. ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಸತತ ನಾಲ್ಕನೇ ಸೋಲು ಕಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ತಂಡ ನಿಗದಿತ 20 ಓವರುಗಳಲ್ಲಿ 6 ವಿಕೆಟ್ ಕಳೆದುಕೊಂಡು 151 ರನ್ ಕಲೆಹಾಖಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿನ ಗುರಿ ಬೆನ್ನತ್ತಿ ಇನ್ನೂ 9 ಎಸೆತಗಳು ಬಾಕಿ ಇರುವಂತೆಯೇ ಮೂರು ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತು.
ಮುಂಬೈ ಇಂಡಿಯನ್ಸ್ ಪರವಾಗಿ ಇಶಾನ್ ಕಿಶನ್ 26, ರೋಹಿತ್ ಶರ್ಮಾ 26, ಸೂರ್ಯ ಕುಮಾರ್ ಯಾದವ್ ಅಜೇಯ 68 ರನ್ ಗಳಿಸಿದರು. ಆರ್ಸಿಬಿ ಪರವಾಗಿ ವನಿಂದು ಹಸರಂಗ 2, ಆಕಾಶ್ ದೀಪ್ 1, ಹರ್ಷಲ್ ಪಟೇಲ್ 2 ವಿಕೆಟ್ ಪಡೆದರು.
ರಾಯಲ್ ಚಾಲೆಂಜರ್ಸ್ ಬೆಂಗಳೂರು 18.3 ಓವರುಗಳಲ್ಲಿ 3 ವಿಕೆಟ್ 152 ರನ್ ಗಳಿಸಿ ಗೆಲುವಿನ ನಗೆ ಬೀರಿದೆ. ಫಾಫ್ ಡು ಪ್ಲೆಸಿಸ್ 16, ಅನುಜ್ ರಾವತ್ 66, ವಿರಾಟ್ ಕೊಹ್ಲಿ 48, ದಿನೇಶ್ ಕಾರ್ತಿಕ್ ಅಜೇಯ 7 ಹಾಗೂ ಗ್ಲೆನ್ ಮ್ಯಾಕ್ಸ್ವೆಲ್ ಅಜೇಯ 8 ರನ್ ಗಳಿಸಿದ್ದಾರೆ.