ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೋಮವಾರದಂದು ತಮ್ಮ ಸಚಿವ ಸಂಪುಟವನ್ನು ಪುನಾರಚಿಸಿದ್ದು, ಇದರಲ್ಲಿ ನಟಿ ರೋಜಾ ಸಹ ಸೇರ್ಪಡೆಗೊಂಡಿದ್ದಾರೆ.
ಐವರು ಉಪ ಮುಖ್ಯಮಂತ್ರಿಗಳು ಹಾಗೂ 20 ಸಚಿವರು ಸೋಮವಾರದಂದು ಪ್ರಮಾಣವಚನ ಸ್ವೀಕರಿಸಿದ್ದು, ಈ ಪೈಕಿ ನಟಿ ರೋಜಾ ಸೇರಿದಂತೆ ನಾಲ್ವರು ಮಹಿಳೆಯರು ಸಂಪುಟದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.
ಇದರ ಮಧ್ಯೆ ಹಿರಿಯ ಸಚಿವರನ್ನು ಸಂಪುಟದಿಂದ ಕೈ ಬಿಟ್ಟಿರುವುದಕ್ಕೆ ಅವರುಗಳ ಬೆಂಬಲಿಗರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಇದು ಯಾವ ತಿರುವು ಪಡೆಯುತ್ತದೆ ಎಂಬುದನ್ನು ಕಾದು ನೋಡಬೇಕಿದೆ.