ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ಸಂತೋಷ್ ಪಾಟೀಲ್ ಅವರಿಗೆ ನ್ಯಾಯ ಸಿಗಬೇಕೆಂದು ಕಾಂಗ್ರೆಸ್, ಸರ್ಕಾರವನ್ನು ಆಗ್ರಹಿಸಿದೆ.
ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಈ ಕುರಿತಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೂಡಲೇ ಈಶ್ವರಪ್ಪನವರನ್ನು ಸರ್ಕಾರದಿಂದ ವಜಾಗೊಳಿಸಬೇಕು, ಇಲ್ಲವಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ಈಶ್ವರಪ್ಪನವರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಇದು 40% ಸರ್ಕಾರ ಎಂದು ಒಪ್ಪಿಕೊಂಡಂತಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರದಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೆರೆ ಪರಿಹಾರ ಘೋಷಣೆ ಮಾಡದ ಸರ್ಕಾರ, ಇದೀಗ ತಮ್ಮ ಪಕ್ಷದ ಕಾರ್ಯಕರ್ತನ ಆತ್ಮಹತ್ಯೆಗೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.