ಸಚಿವ ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲೇ ಕಾಂಟ್ರಾಕ್ಟರ್ ಅಸೋಸಿಯೇಷನ್ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸುದ್ದಿಗೋಷ್ಠಿ ನಡೆಸಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಕೆಂಪಣ್ಣ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಸಂತೋಷ್ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆಯಾಗಿದೆ ಸಿಎಂ ಕಚೇರಿಯಲ್ಲಿ ಭ್ರಷ್ಟಾಚಾರ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಟೆಂಡರ್ ಕಾಮಗಾರಿ ಪಡೆಯಲು 5% ಲಂಚ ನೀಡಬೇಕಾದ ಪರಿಸ್ಥಿತಿ ಇದೆ. ಟೆಂಡರ್ ಮುಗಿದ ಬಳಿಕ ಕಾಮಗಾರಿ ಮುಗಿದ ಬಳಿಕ 40 ಪರ್ಸೆಂಟ್ ಕಮಿಷನ್ ನೀಡಬೇಕಾಗಿದೆ. ಆರೋಗ್ಯ ಇಲಾಖೆಯಲ್ಲೂ ಕಮಿಷನ್ ದಂದೆ ನಡೆಯುತ್ತಿದೆ. ಸಚಿವ ಸುಧಾಕರ್ 5% ಕಮಿಷನ್ ಗೆ ಬೇಡಿಕೆ ಇಡುತ್ತಿದ್ದಾರೆ. 60% ಕಾಮಗಾರಿಗಳನ್ನು ಅವರ ಸಂಬಂಧಿಕರು ನಡೆಸುತ್ತಿದ್ದಾರೆ ಎಂದು ಕೆಂಪಣ್ಣ ಆರೋಪಿಸಿದ್ದಾರೆ.
ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ಯಾವ ಕಾಮಗಾರಿಗಳನ್ನು ನಡೆಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.