alex Certify BIG BREAKING: ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ; ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದ ಸಚಿವ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣ; ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದ ಸಚಿವ ಈಶ್ವರಪ್ಪ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯ ಶಾಂಭವಿ ಲಾಡ್ಜ್‌ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೂ ಮುನ್ನ ತಮ್ಮ ಸಾವಿಗೆ ಸಚಿವ ಕೆ.ಎಸ್.‌ ಈಶ್ವರಪ್ಪನವರೇ ನೇರ ಕಾರಣ. ಅವರು ತಮ್ಮ ಆಪ್ತರ ಮೂಲಕ ಶೇ.40 ಕಮೀಷನ್‌ ಹಣಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಆರೋಪಿಸಿದ್ದರು.

ಅವರ ಆತ್ಮಹತ್ಯೆ ಬಳಿಕ ಪ್ರತಿಪಕ್ಷ ಕಾಂಗ್ರೆಸ್‌ ಹೋರಾಟ ತೀವ್ರಗೊಳಿಸಿದ್ದು, ಮುಖ್ಯಮಂತ್ರಿಗಳು ಈಶ್ವರಪ್ಪನವರ ರಾಜೀನಾಮೆ ಪಡೆಯಬೇಕು. ಅಲ್ಲದೇ ಅವರ ವಿರುದ್ದ ಐಪಿಸಿ ಕಲಂ 306 ಅಡಿ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿತ್ತು. ಇದೀಗ ಉಡುಪಿ ಪೊಲೀಸ್‌ ಠಾಣೆಯಲ್ಲಿ ಈಶ್ವರಪ್ಪನವರ ವಿರುದ್ದ ಪ್ರಕರಣ ದಾಖಲಾಗಿದೆ.

ಇದರ ಮಧ್ಯೆ ಬಿಜೆಪಿ ಹೈಕಮಾಂಡ್‌ ಸಹ ಘಟನೆಯ ಕುರಿತು ವರದಿ ಪಡೆದುಕೊಂಡಿದೆ ಎನ್ನಲಾಗಿದ್ದು, ಹೀಗಾಗಿ ಈಶ್ವರಪ್ಪನವರ ರಾಜೀನಾಮೆ ಪಡೆಯಲು ಮುಖ್ಯಮಂತ್ರಿಗಳಿಗೆ ಸೂಚಿಸಬಹುದು ಎಂದು ಹೇಳಲಾಗಿತ್ತು.

ಆದರೆ ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಈಶ್ವರಪ್ಪನವರು, ಯಾವುದೇ ಕಾರಣಕ್ಕೂ ತಾವು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ತಮ್ಮ ವಿರುದ್ದದ ಆರೋಪಗಳು ಸುಳ್ಳು. ತನಿಖೆ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದು ಹೇಳಿದರು.

ಗ್ರಾಮೀಣಾಭಿವೃದ್ದಿ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಟೆಂಡರ್‌ ಇಲ್ಲದೆಯೇ ಎಲ್ಲಾದರೂ ಕಾಮಗಾರಿ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಈಶ್ವರಪ್ಪನವರು, ಸಂತೋಷ್‌ ಪಾಟೀಲ್‌ ಯಾವುದೇ ಡೆತ್‌ ನೋಟ್‌ ಬರೆದಿಟ್ಟಿಲ್ಲ. ಇನ್ನು ವಾಟ್ಸಾಪ್‌ ನಲ್ಲಿ ಕಳಿಸಿರುವ ಸಂದೇಶ ಅವರೇ ಕಳಿಸಿದ್ದಾ ಅಥವಾ ಬೇರೆಯವರಾ ಎಂಬುದೂ ಗೊತ್ತಿಲ್ಲ ಎಂದರು.

ನಾನು ಸಂತೋಷ್‌ ಪಾಟೀಲ್‌ ಮುಖವನ್ನೇ ನೋಡಿಲ್ಲ. ಅಂತದ್ದರಲ್ಲಿ 80 ಬಾರಿ ಭೇಟಿಯಾಗಿದ್ದೇನೆ ಎಂದು ಹೇಳಿದ್ದಾರೆ. ಕಾಮಗಾರಿ ನೀಡಲು ಕೆಲವೊಂದು ನಿಯಮಗಳೂ ಸಹ ಇರುತ್ತವೆ ಎಂದು ಈಶ್ವರಪ್ಪ ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...