ದ್ವಿತೀಯ ವರ್ಷದ ಬಿಟೆಕ್ ವಿದ್ಯಾರ್ಥಿಯನ್ನು ಕಾಲೇಜಿನ ಆವರಣದಲ್ಲಿ ಬರ್ಬರವಾಗಿ ಹತ್ಯೆಗೈದ ಘಟನೆಯು ಮೀರತ್ನ ಎಂಐಇಟಿ ಕಾಲೇಜಿನಲ್ಲಿ ಬುಧವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು 20 ವರ್ಷದ ನಿಖಿಲ್ ಚೌಧರಿ ಎಂದು ಗುರುತಿಸಲಾಗಿದೆ. ಈತ ಪ್ರಥಮ ವರ್ಷದ ವಿದ್ಯಾರ್ಥಿಗಳೊಂದಿಗೆ ಜಗಳವಾಡಿದ್ದ ಎನ್ನಲಾಗಿದೆ. ಈ ಗಲಾಟೆಯ ಬಳಿಕ ಅವರು ಅಭಿಷೇಕ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ.
ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಯ್ತಾದರೂ ವೈದ್ಯರು ಈತ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದಾರೆ.
ಮೃತ ನಿಖಿಲ್ ಸ್ನೇಹಿತ ಸಂಜಯ್ ಚೌಹಾಣ್, ನಿಖಲ್ ಒಬ್ಬ ಉತ್ತಮ ವಿದ್ಯಾರ್ಥಿಯಾಗಿದ್ದ. ಅಲ್ಲದೇ ಈತ ಈವರೆಗೆ ಯಾರೊಂದಿಗೂ ಜಗಳವಾಡಿರಲಿಲ್ಲ ಎಂದು ಹೇಳಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಮೀರತ್ ಎಸ್ಪಿ ಕೇಶವ್ ಕುಮಾರ್, ವೈಯಕ್ತಿಕ ಕಾರಣಕ್ಕೆ ಕೆಲವು ವಿದ್ಯಾರ್ಥಿಗಳು ಸೇರಿ ನಿಖಿಲ್ನನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾರೆ ಎಂದು ಮಾಹಿತಿ ನೀಡಿದರು.