ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಈಶ್ವರಪ್ಪರನ್ನು ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿವಾಸದವರೆಗೂ ಮೆರವಣಿಗೆ ಹಮ್ಮಿಕೊಂಡಿದ್ದು, ಈ ವೇಳೆ ಪೊಲೀಸರು ಮಾರ್ಗಮಧ್ಯದಲ್ಲೇ ಮೆರವಣಿಗೆ ತಡೆದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದಿದ್ದಾರೆ.
ಇದರ ಮಧ್ಯೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಾಥಮಿಕ ವರದಿ ಬರುವವರೆಗೂ ಈಶ್ವರಪ್ಪರ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.