ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ 40 % ಕಮಿಷನ್ ಬಗ್ಗೆ ಆರೋಪ ಮಾಡಿದ್ದ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಆತ್ಮಹತ್ಯೆ ಹಿಂದೆ ಮಹಾ ನಾಯಕನ ಕೈವಾಡವಿದೆ ಎಂದು ಬೆಳಗಾವಿ ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ.
ಮೊದಲು ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಸಂತೋಷ್ ಪಾಟೀಲ್ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ನನ್ನ ವಿರುದ್ಧ ಷಡ್ಯಂತ್ರ ನಡೆಸಿದವರೆ ಈಗ ಈಶ್ವರಪ್ಪನವರ ವಿರುದ್ಧವೂ ಷಡ್ಯಂತ್ರ ರೂಪಿಸಿದ್ದಾರೆ. ಸಂತೋಷ್ ಪಾಟೀಲ್ ಗುತ್ತಿಗೆ ಕಾಮಗಾರಿ ಬಗ್ಗೆ ಮಾಹಿತಿ ಸಂಗ್ರಹಿಸಿ ಸೋಮವಾರ ಪತ್ರಿಕಾಗೋಷ್ಠಿ ನಡೆಸುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ, ರಮೇಶ್ ಜಾರಕಿಹೊಳಿ ಅವರ ಬಳಿ ದಾಖಲೆಗಳಿದ್ದರೆ ಕೂಡಲೇ ಬಹಿರಂಗಪಡಿಸುವಂತೆ ಸವಾಲೆಸೆದಿದ್ದಾರೆ.