ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ದ ಎಫ್‌ಐಆರ್ ದಾಖಲಾಗಿರುವ ಹಿನ್ನಲೆಯಲ್ಲಿ ಸಚಿವ ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆ ಸಲ್ಲಿಕೆಗೂ ಮುನ್ನ ಬೆಂಬಲಿಗರೊಂದಿಗೆ ತಮ್ಮ ಶಕ್ತಿ ಪ್ರದರ್ಶನ ತೋರಿಸಿರುವ ಕೆ.ಎಸ್. ಈಶ್ವರಪ್ಪ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕೃತ ನಿವಾಸಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜೀನಾಮೆ ನೀಡುವ ಸಂದರ್ಭದಲ್ಲೂ ಈಶ್ವರಪ್ಪನವರು ಪರೋಕ್ಷವಾಗಿ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿರುವ ಕುರುಬ ಸಮುದಾಯದ ಸಚಿವರುಗಳು ಈ ಸಂದರ್ಭದಲ್ಲಿ ಹಾಜರಾಗಿ ಈಶ್ವರಪ್ಪನವರಿಗೆ ತಮ್ಮ ನೈತಿಕ ಬೆಂಬಲ ಸೂಚಿಸಿದ್ದಾರೆ.