ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಎಂಟ್ರಿ ಕೊಟ್ಟಿದ್ದು ತನಿಖೆಯ ಹಾದಿ ಇನ್ನಷ್ಟು ಚುರುಕುಗೊಳ್ಳಲಿದೆ ಎಂದು ನಿರೀಕ್ಷಿಸಲಾಗಿದೆ.
ಎಡಿಜಿಪಿ ಪ್ರತಾಪ್ ರೆಡ್ಡಿ ಬೆಳಗ್ಗೆ 8 ಗಂಟೆಯಿಂದ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಸತತ ನಾಲ್ಕು ಗಂಟೆಗಳಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ ಹಾಗೂ 5 ತನಿಖಾ ತಂಡಗಳ ಜೊತೆಯಲ್ಲಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವನ್ನು ಐದು ಆಯಾಮಗಳಲ್ಲಿ ಮುನ್ನಡೆಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ತನಿಖೆ ನಡೆಸುವಲ್ಲಿ ಅತ್ಯಂತ ಚಾಣಾಕ್ಷ ಅಧಿಕಾರಿ ಎಂದು ಹೆಸರು ಪಡೆದಿರುವ ಪ್ರತಾಪ್ ರೆಡ್ಡಿ ಈಗಾಗಲೇ ಅನೇಕ ಜಟಿಲ ಪ್ರಕರಣಗಳನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರ್.ಎನ್. ನಾಯಕ್ ಕೊಲೆ ಪ್ರಕರಣ, ಮಣಿಪಾಲ ರೇಪ್ ಪ್ರಕರಣ ಸೇರಿದಂತೆ ಹಲವು ಜಟಿಲ ಪ್ರಕರಣಗಳನ್ನು ಬೇಧಿಸಿ ಆರೋಪಿಗಳನ್ನು ಕಂಬಿ ಹಿಂದೆ ಅಟ್ಟುವಲ್ಲಿ ಪ್ರತಾಪ್ ರೆಡ್ಡಿ ಯಶಸ್ವಿಯಾಗಿದ್ದಾರೆ.