ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ 40 ಪರ್ಸೆಂಟ್ ಕಮಿಷನ್ ಆರೋಪ ಎದುರಿಸುತ್ತಿರುವ ಸಚಿವ ಕೆ ಎಸ್ ಈಶ್ವರಪ್ಪ ನಿನ್ನೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾನು ನಿರ್ದೋಷಿ ನನಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಈಶ್ವರಪ್ಪ ಅವರಿಗೆ ಬೆಂಬಲ ಸೂಚಿಸಲು ಸ್ವಾಮೀಜಿಗಳು ತೆರಳಿದ್ದ ವೇಳೆ ಈ ಪ್ರತಿಕ್ರಿಯೆ ನೀಡಿದ್ದಾರೆ.
ರಾಜಿನಾಮೆ ವೇಳೆ ರಾಜ್ಯದ ಜನತೆ ನನ್ನನ್ನು ಬೆಂಬಲಿಸಿದ್ದಾರೆ. ರಾಜ್ಯದ ಜನತೆ ನನ್ನ ಮೇಲೆ ಬಹಳ ಪ್ರೀತಿ ಇಟ್ಟುಕೊಂಡಿದ್ದಾರೆ. ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.
ಸಂತೋಷ್ ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂದು ತನಿಖೆಯ ನಂತರ ಬಹಿರಂಗಗೊಳ್ಳಲಿದೆ. ಅವರು ನನ್ನ ಕೋರ್ಟ್ ನೋಟೀಸಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡರಾ, ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.