ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಎಸ್. ಈಶ್ವರಪ್ಪ ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈಗ ಅವರ ಬಂಧನದ ಬಗ್ಗೆ ಹೋರಾಟವೇಕೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್ನ್ನು ಪ್ರಶ್ನಿಸಿದ್ದಾರೆ.
ವಿಜಯಪುರದ ಆಲಮಟ್ಟಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ನಾನು ಆಗ್ರಹಿಸಿದ್ದೆ. ಅದರಂತೆ ಈಶ್ವರಪ್ಪ ರಾಜೀನಾಮೆ ನೀಡಿದ್ದಾರೆ. ಆದರೆ ಇಲ್ಲಿ ಅವರ ಬಂಧನವೇಕೆ ಆಗಬೇಕು ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.
ಈಶ್ವರಪ್ಪ ಪರ್ಸಂಟೇಜ್ ದಂಧೆ ನಡೆಸುತ್ತಾರೆಂದು ಬೀದಿಗಿಳಿದ ಕಾಂಗ್ರೆಸ್ ಧರ್ಮ ಧರ್ಮಗಳ ನಡುವೆ ಸಂಘರ್ಷ ನಡೆಯುವಾಗ ಏಕೆ ಬೀದಿಗಿಳಿಯಲಿಲ್ಲ..? ಆಗ ಕಾಂಗ್ರೆಸ್ ಮೌನಕ್ಕೆ ಶರಣಾಗಿದ್ದೇಕೆ..? ಈಗ ಸಿದ್ದರಾಮಯ್ಯ ಪರ್ಸಂಟೇಜ್ ಬಗ್ಗೆ ಮಾತನಾಡ್ತಾರೆ. ಆಗ ಸಿದ್ದರಾಮಯ್ಯ ಅವಧಿಯಲ್ಲಿ ಸರ್ಕಾರದ ನಡವಳಿಕೆಗೆ ಬೇಸತ್ತು ಕಲ್ಲಪ್ಪ ಹಂಡಿ ಭಾಗ ಆತ್ಮಹತ್ಯೆ ಮಾಡಿಕೊಂಡರು. ಆಗೇಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿಲ್ಲ ಎಂದು ಪ್ರಶ್ನಿಸಿದ್ರು.