ರಾಗಿ ಬೆಳೆಗಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಗಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದು, ಶೀಘ್ರದಲ್ಲೇ ರಾಗಿ ಖರೀದಿ ಕೇಂದ್ರಗಳು ಆರಂಭವಾಗಲಿವೆ.
ಸಚಿವ ಎಸ್.ಟಿ. ಸೋಮಶೇಖರ್ ಮೈಸೂರಿನ ಪಿರಿಯಾಪಟ್ಟಣದಲ್ಲಿ ಈ ಮಾಹಿತಿ ನೀಡಿದ್ದು, ಮೈಸೂರು ಭಾಗದಲ್ಲಿ ರಾಗಿಯನ್ನು ಹೆಚ್ಚಾಗಿ ಬೆಳೆದಿರುವುದರಿಂದ ರಾಗಿ ಖರೀದಿ ಕೇಂದ್ರಗಳನ್ನು ಮತ್ತೆ ಆರಂಭ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಇನ್ನು ಯಶಸ್ವಿನಿ ಯೋಜನೆ ಜಾರಿ ಕುರಿತಂತೆ ಮಾತನಾಡಿದ ಸಚಿವರು, ಇನ್ನು ಹದಿನೈದು ಇಪ್ಪತ್ತು ದಿನಗಳಲ್ಲಿ ಯೋಜನೆಗೆ ಚಾಲನೆ ಸಿಗಲಿದೆ. ಇದನ್ನು ಕೇಂದ್ರ ಸಚಿವ ಅಮಿತ್ ಶಾ ಅವರು ಈಗಾಗಲೇ ಉದ್ಘಾಟಿಸಿದ್ದು, ಸದ್ಯದಲ್ಲೇ ಅನುಷ್ಠಾನಗೊಳ್ಳಲಿದೆ ಎಂದರು.