ಕೊರೊನಾ ಮೂರನೇ ಅಲೆ ಕೊನೆಗೊಳ್ಳುತ್ತಿರುವ ಬೆನ್ನಲ್ಲೇ ಇದೀಗ ದೇಶದಲ್ಲಿ ನಾಲ್ಕನೇ ಅಲೆ ಕಾಣಿಸಿಕೊಳ್ಳಬಹುದೆಂಬ ಆತಂಕ ಶುರುವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳವಾಗಿದ್ದು, ಹೀಗಾಗಿ ಕೇಂದ್ರ ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ.
ಅದರಲ್ಲೂ ದೆಹಲಿ, ಮಹಾರಾಷ್ಟ್ರ, ಉತ್ತರ ಪ್ರದೇಶ, ಮಿಜೋರಾಂ ಹಾಗೂ ಹರಿಯಾಣದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಕಾರಣ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜೊತೆಗೆ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರತ್ತ ಗಮನ ಹರಿಸಬೇಕೆಂದು ಕೇಂದ್ರ ಆರೋಗ್ಯ ಸಚಿವಾಲಯದಿಂದ ಬರೆದಿರುವ ಪತ್ರದಲ್ಲಿಸ ಸೂಚಿಸಲಾಗಿದೆ.
ಕಳೆದ 24 ಗಂಟೆಯಲ್ಲಿ ದೇಶದ ಕೊರೊನಾ ಸೋಂಕಿತರ ಸಂಖ್ಯೆ 2,067 ಕ್ಕೆ ಏರಿಕೆಯಾಗಿದ್ದು, ಇದು ನಿನ್ನೆಗೆ ಹೋಲಿಸಿದರೆ ಸೋಂಕಿತರ ಸಂಖ್ಯೆಯಲ್ಲಿ ಶೇ.65 ರಷ್ಟು ಹೆಚ್ಚಳವಾದಂತಾಗಿದೆ. ದೆಹಲಿಯಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ʼಮಾಸ್ಕ್ʼ ಧಾರಣೆಯನ್ನು ಕಡ್ಡಾಯ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿದರೆ 500 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ತಿಳಿಸಲಾಗಿದೆ.