ಬೆಂಗಳೂರು: ರಾಜ್ಯಾದ್ಯಂತ ಸಂಚಲನ ಮೂಡಿಸಿರುವ 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಸಾಕ್ಷ್ಯ ಬಟಾಬಯಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿಗಳಿಗೆ ಖತರ್ ನಾಕ್ ಗ್ಯಾಂಗ್ ಲಾಡ್ಜ್ ನ ರೂಮ್ ನಲ್ಲಿ ಕುಳಿತು ಬ್ಲೂಟೂತ್ ಮೂಲಕ ಉತ್ತರ ಹೇಳಿಕೊಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.
ಆರೋಪಿಗಳು ಬೆಂಗಳೂರಿನ ಲಾಡ್ಜ್ ನಲ್ಲಿ ಕುಳಿತು ಪಿಎಸ್ಐ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಜತೆಯಲ್ಲಿಟ್ಟುಕೊಂಡು ಪ್ರತಿಯೊಂದು ಪ್ರಶ್ನೆಗಳಿಗೂ ಉತ್ತರ ಹೇಳುತ್ತಿರುವ ದೃಶ್ಯ ವಿಡಿಯೋದಲ್ಲಿ ಕಂಡುಬಂದಿದೆ.
ತರಬೇತುದಾರನ ಕುತ್ತಿಗೆ ಸೀಳಿ ಕೊಂದ ಕರಡಿ: ಭಯಾನಕ ಹಳೆ ವಿಡಿಯೋ ಮತ್ತೆ ವೈರಲ್
ಪಿಎಸ್ಐ ನೇಮಕಾತಿ ಅಕ್ರಮದ ಹಿಂದೆ ಪ್ರಭಾವಿಗಳ ಕೈವಾಡವಿರುವುದು ಬಯಲಾಗುತ್ತಿದ್ದು, ಈಗಾಗಲೇ ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ಸಹೋದರರನ್ನು ಸಿಐಡಿ ಬಂಧಿಸಿದೆ. ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ತಲೆಮರೆಸಿಕೊಂಡಿದ್ದು, ಆಕೆಗಾಗಿ ಶೋಧ ಕಾರ್ಯ ಮುಂದುವರೆದಿದೆ. ಈ ನಡುವೆ ಅಕ್ರಮದ ಒಂದೊಂದೆ ಸಾಕ್ಷ್ಯಗಳು ಬಟಾಬಯಲಾಗುತ್ತಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.