ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ನೌಕರರು ಹಾಗೂ ಚುನಾಯಿತ ಪ್ರತಿನಿಧಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ ಅಡಿ ಈ ಒಂದು ಸೌಲಭ್ಯ ಸಿಗಲಿದೆ.
ವಾರ್ಷಿಕ 330 ರೂಪಾಯಿ ಪಾವತಿಸಿದರೆ ಸಹಜ ಮರಣ ಅಥವಾ ಅಪಘಾತದಲ್ಲಿ ಸಾವನ್ನಪ್ಪಿದ ವೇಳೆ ಮೃತರ ಅವಲಂಬಿತರಿಗೆ 2 ಲಕ್ಷ ರೂಪಾಯಿ ವಿಮೆ ಪರಿಹಾರ ಸಿಗಲಿದೆ.
ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿ ವಾರ್ಷಿಕ ಕೇವಲ 12 ರೂಪಾಯಿ ಪಾವತಿಸಿದರೆ ಅಪಘಾತದಿಂದ ಮರಣ ಹೊಂದಿದ ಸಂದರ್ಭದಲ್ಲಿ ಅವಲಂಬಿತರಿಗೆ 2 ಲಕ್ಷ ರೂಪಾಯಿ ವಿಮೆ ಪರಿಹಾರ ದೊರೆಯಲಿದೆ.
ಹೀಗಾಗಿ ಸಾಮಾಜಿಕ ಭದ್ರತಾ ಯೋಜನೆಯಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ವೈಯಕ್ತಿಕ ಅಪಘಾತ ವಿಮೆ ಮಾಡುವಂತೆ ಈಗಾಗಲೇ ಪಂಚಾಯತ್ ರಾಜ್ ಆಯುಕ್ತಾಲಯದಿಂದ ರಾಜ್ಯದ ಎಲ್ಲ ಜಿಲ್ಲಾ ಪಂಚಾಯತ್ ಸಿಇಓ ಗಳಿಗೆ ಸೂಚನೆ ನೀಡಲಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉಳಿತಾಯ ಖಾತೆ ಹೊಂದಿರುವ ನೌಕರರು, ಚುನಾಯಿತಿ ಪ್ರತಿನಿಧಿಗಳು ಈ ವಿಮೆಯನ್ನು ಮಾಡಿಸಿಕೊಳ್ಳಬಹುದಾಗಿದೆ.