ಬೆಂಗಳೂರು: ಪಿಎಸ್ ಐ ನೇಮಕಾತಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಸಾಕ್ಷಾಧಾರ, ದಾಖಲೆಗಳನ್ನು ಒದಗಿಸುವಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ನೋಟೀಸ್ ಜಾರಿ ಮಾಡಲಾಗಿದ್ದು, ಈ ಕುರಿತು ಮಾತನಾಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಅಕ್ರಮ ಎಸಗಿದವರನ್ನು ಕಾನೂನು ಬಲಗೆ ತರಲು ಶಾಸಕರು ಸಹಕರಿಸಬೇಕು ಎಂದು ಹೇಳಿದ್ದಾರೆ.
ಯಾವುದೇ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರ ಬೇಡ, ಪ್ರಿಯಾಂಕ್ ಖರ್ಗೆ ಅವರು ತಮ್ಮ ಬಳಿ ಇರುವ ದಾಖಲೆಗಳನ್ನು ಸಿಐಡಿಗೆ ನೀಡಬೇಕು. ಸಿಐಡಿ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ. ತಮ್ಮ ಬಳಿ ಇರುವ ಸಾಕ್ಷ್ಯಗಳನ್ನು ಒದಗಿಸಿ, ತಮ್ಮ ಹೊಣೆಗಾರಿಕೆಯನ್ನು ನಿಭಾಯಿಸಿ ಎಂದು ಹೇಳಿದರು.
ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಮತ್ತಷ್ಟು ಹೆಚ್ಚಳವಾಗಲಿದೆ ಅಡುಗೆ ಎಣ್ಣೆ ಬೆಲೆ
ಅಕ್ರಮದಲ್ಲಿ ಭಾಗಿಯಾದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಯಾರನ್ನೂ ರಕ್ಷಿಸುವ ಪ್ರೆಶ್ನೆಯೇ ಇಲ್ಲ ಎಂದು ಹೇಳಿದರು.
ಪಿಎಸ್ ಐ ನೇಮಕಾತಿ ಅಕ್ರಮದ ಬಗ್ಗೆ ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಪ್ರಿಯಾಂಕ್ ಖರ್ಗೆ, ಆಡಿಯೋ ಬಿಡುಗಡೆ ಮಾಡಿದ್ದರು. ಅಕ್ರಮ ಕುರಿತು ತಮ್ಮ ಬಳಿ ಕೆಲ ದಾಖಲೆಗಳಿರುವುದಾಗಿ ಶಾಸಕರು ಹೇಳಿದ್ದರು. ಈ ನಿಟ್ಟಿನಲ್ಲಿ ಗೃಹ ಸಚಿವರು ದಾಖಲೆಗಳನ್ನು ಸಿಐಡಿಗೆ ನೀಡುವಂತೆ ಮನವಿ ಮಾಡಿದ್ದಾರೆ.