ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ‘ನವ ಭಾರತದಲ್ಲಿ ಮಾಧ್ಯಮಗಳ ಪಾತ್ರ’ಸಮಾರಂಭವನ್ನು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಕ್ಷಾಂತರ ಸಮಸ್ಯೆ ದೇಶಕ್ಕೆ ಪಿಡುಗಾಗಿ ಪರಿಣಮಿಸಿದೆ, ಚುನಾಯಿತ ಜನಪ್ರತಿನಿಧಿಗಳ ಪಕ್ಷಾಂತರಕ್ಕೆ ಕಡಿವಾಣ ಹಾಕಲು, ಪಕ್ಷಾಂತರ ನಿಷೇಧ ಕಾಯ್ದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ತಿಳಿಸಿದರು.
ಕಾಯ್ದೆಯಲ್ಲಿನ ಲೋಪಗಳನ್ನು ಗುರುತಿಸಿ ಅವುಗಳಿಗೆ ಸೂಕ್ತ ತಿದ್ದುಪಡಿಗಳನ್ನು ತರಬೇಕು, ಪಕ್ಷಾಂತರದಿಂದಾಗಿ ರಾಜಕೀಯ ಮೌಲ್ಯ ಕುಸಿಯುತ್ತಿದೆ, ಪಕ್ಷಾಂತರ ಮಾಡುವವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಪುನರ್ ಆಯ್ಕೆಯಾಗಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.
ರಾಜಕೀಯ ಪಕ್ಷಗಳು ನೀತಿ ಸಂಹಿತೆ ಅಳವಡಿಸಿಕೊಂಡು ರಚನಾತ್ಮಕ ಚಟುವಟಿಕೆಗಳನ್ನು ಬೆಂಬಲಿಸಿ ಬದ್ಧತೆಯನ್ನು ತೋರಬೇಕು ಎಂದು ಸಲಹೆ ನೀಡಿದ್ದಾರೆ.