ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಇದು ದಿನೇ ದಿನೇ ವ್ಯಾಪಕವಾಗತೊಡಗಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ನಾಲ್ಕನೇ ಅಲೆ ಆರಂಭವಾಗಲಿದೆಯಾ ಎಂಬ ಅನುಮಾನ ಮೂಡಿದೆ.
ಇದರ ಮಧ್ಯೆ, ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಮಾಸ್ಕ್ ಧಾರಣೆ ನಿಯಮ ಇನ್ನು ಮುಂದೆ ಕಡ್ಡಾಯವಾಗಿರಲಿದೆ. ಈ ಕುರಿತ ಆದೇಶ ಕೆಲ ಹೊತ್ತಿನಲ್ಲೇ ಹೊರ ಬೀಳಲಿದೆ ಎನ್ನಲಾಗಿದೆ.
ರಾಜ್ಯದಲ್ಲಿನ ಕೊರೊನಾ ಪರಿಸ್ಥಿತಿ ಕುರಿತು ಬೊಮ್ಮಾಯಿಯವರೊಂದಿಗೆ ಸಭೆ ನಡೆಸಿದ ಬಳಿಕ ಸಚಿವ ಸುಧಾಕರ್, ಮಾಧ್ಯಮ ಪ್ರತಿನಿಧಿಗಳಿಗೆ ಈ ಮಾಹಿತಿ ನೀಡಿದ್ದು, ಮಾಸ್ಕ್ ಧಾರಣೆ ಕಡ್ಡಾಯವಾಗಿದ್ದರೂ ಸದ್ಯಕ್ಕೆ ದಂಡ ವಿಧಿಸುವ ಯಾವುದೇ ಇರಾದೆ ಹೊಂದಿಲ್ಲ ಎಂದು ತಿಳಿಸಿದ್ದಾರೆ.