ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ 10 ಮತ್ತು 12ನೇ ತರಗತಿಗಳ ಎರಡನೇ ಅವಧಿಯ ಮುಖ್ಯ ಪರೀಕ್ಷೆಗಳು ದೇಶದಾದ್ಯಂತ ಇಂದಿನಿಂದ ಆರಂಭವಾಗಿದ್ದು, 35 ಲಕ್ಷ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್.
ದೇಶದಲ್ಲಿ ಕೊರೋನಾ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ 2021-22 ನೇ ಶೈಕ್ಷಣಿಕ ವರ್ಷದ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ಪಠ್ಯಕ್ರಮವನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಮೊದಲ ಅವಧಿಯ ಪರೀಕ್ಷೆಗಳು ಈಗಾಗಲೇ ಪೂರ್ಣಗೊಂಡಿದೆ.
ಇದೀಗ ಇಂದಿನಿಂದ ಎರಡನೇ ಹಾಗೂ ಅಂತಿಮ ಅವಧಿಯ ಪರೀಕ್ಷೆಗಳು ಆರಂಭವಾಗಿದ್ದು, ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಮಾಸ್ಕ್ ಧರಿಸಿಕೊಂಡು ಬರುವುದು ಕಡ್ಡಾಯವಾಗಿದೆ.