ಕರ್ನಾಟಕ ಸರ್ಕಾರದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸಾ ವ್ಯವಸ್ಥೆ ಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಯೂನಿಟ್ ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ʼಖಾಸಗಿ ಆಸ್ಪತ್ರೆಗಳಲ್ಲಿ ಸಿಗುವ ದುಬಾರಿ ಆರೋಗ್ಯ ಸೇವೆಗಳು ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಸಿಕ್ಕಾಗ ಮಾತ್ರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮಾಡಬಹುದುʼ ಎಂದು ಹೇಳಿದರು.
‘ಪುಷ್ಪ’ ಶೈಲಿಯಲ್ಲಿ ಕೋರ್ಟ್ ನಿಂದ ಹೊರಬಂದ ಶಾಸಕ ಜಿಗ್ನೇಶ್ ಮೇವಾನಿ
ʼಹೈಪರ್ ಬ್ಯಾರಿಕ್ ಆಕ್ಸಿಜನ್ ಥೆರಪಿ ಅಥವಾ HBO2 ದುಬಾರಿ ಚಿಕಿತ್ಸೆಯಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಇಂತಹ ಸೇವೆ ಲಭ್ಯವಾಗುತ್ತಿರುವುದರಿಂದ ಸಾಮಾನ್ಯ ಜನರಿಗೂ ಇದರ ಸೇವೆ ಸಿಗುವ ಹಾಗಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉದ್ಘಾಟನೆಯಾಗಿರುವ ಈ HBO2 ಯೂನಿಟ್ ಅನ್ನು ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗಿದೆ. ಸುಮಾರು 3.5 ಕೋಟಿ ರೂಪಾಯಿ ವೆಚ್ಚದ ಆಧುನಿಕ ಯಂತ್ರೋಪಕರಣಗಳು ಇವಾಗಿವೆʼ ಎಂದು ವಿವರಿಸಿದರು.
ಇಲ್ಲಿ ಲಭ್ಯವಿರುವ ಆರೋಗ್ಯ ಸೌಲಭ್ಯಗಳು ರಾಜ್ಯದ ಆರೋಗ್ಯ ಕ್ಷೇತ್ರವನ್ನು ಮತ್ತೊಂದು ಹಂತಕ್ಕೆ ಕೊಂಡೊಯುತ್ತಿವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಆರೋಗ್ಯ ಸೇವೆ ಸಾರ್ವಜನಿಕರಿಗೆ ಸಿಗುವಂತಾಗಿದೆ. ದುಬಾರಿ ಚಿಕಿತ್ಸೆಗಳು ಸರ್ಕಾರಿ ಆರೋಗ್ಯ ಸೇವೆಗಳ ಮೂಲಕ ಬಡವರಿಗೂ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದರು.