ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೋವಿಡ್ 4ನೇ ಅಲೆ ಆತಂಕದ ನಡುವೆ ಜನಸಾಮಾನ್ಯರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ-ಕೆಎಂಎಫ್ ಮತ್ತೊಂದು ಶಾಕ್ ನೀಡಲು ಮುಂದಾಗಿದೆ. ಹಾಲಿನ ದರ ಏರಿಕೆ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ.
ನಂದಿನಿ ಹಾಲಿನ ದರಕ್ಕೆ ಹೋಲಿಸಿದರೆ ಇತರ ಸಂಸ್ಥೆಗಳ ಹಾಲಿನ ದರ ಲೀಟರ್ ಗೆ 8ರಿಂದ 10 ರೂಪಾಯಿ ಹೆಚ್ಚಿವೆ. ಹಾಗಾಗಿ ನಂದಿನಿ ಹಾಲಿನ ದರ ಲೀಟರ್ ಗೆ 3 ರೂಪಾಯಿ ಹೆಚ್ಚಿಸಬೇಕು. ಕರ್ನಾಟಕದ 14 ಹಾಲು ಒಕ್ಕೂಟಗಳು ಲೀಟರ್ ಗೆ 5 ರೂಪಾಯಿ ದರ ಹೆಚ್ಚಿಸುವಂತೆ ಮನವಿ ಮಾಡಿದ್ದವು. ಆದರೆ ಗ್ರಾಹಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ 3 ರೂಪಾಯಿ ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ.
ಖಾಸಗಿ ಬಸ್ ಭೀಕರ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಒಟ್ಟಾರೆ ಹಾಲಿನ ದರ ಭಾರಿ ಏರಿಕೆಯಾಗಲಿದ್ದು, ಮೇ 1 ರಿಂದಲೇ ಪರಿಷ್ಕೃತ ದರ ಜಾರಿಗೆ ಬರುವ ಸಾಧ್ಯತೆ ದಟ್ಟವಾಗಿದೆ.