ಚೆನ್ನೈ: ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಆಸ್ಪತ್ರೆಯಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ವಿಷಯ ತಿಳಿಯುತ್ತಿದ್ದಂತೆ ರೋಗಿಗಳನ್ನು ಸುರಕ್ಷಿತವಾಗಿ ಬೇರೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚಾರಣೆಯಲ್ಲಿ ನಿರತವಾಗಿವೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಜೆ.ರಾಧಾಕೃಷ್ಣನ್ ತಿಳಿಸಿದ್ದಾರೆ.
ರಾಜೀವ್ ಗಾಂಧಿ ಆಸ್ಪತ್ರೆಯ ಹಳೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೊಸ ಬ್ಲಾಕ್ ಗಳು ಸುರಕ್ಷಿತವಾಗಿವೆ. ಸಾವು-ನೋವಿನ ಬಗ್ಗೆ ಈವರೆಗೆ ವರದಿಯಾಗಿಲ್ಲ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.