ನವದೆಹಲಿ: ಬೀದಿಬದಿ ವ್ಯಾಪಾರಿಗಳಿಗೆ ಕಿರು ಸಾಲ ನೀಡುವ ಪಿಎಂ ಸ್ವನಿಧಿ ಯೋಜನೆಯನ್ನು ಎರಡು ವರ್ಷ ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಸಂಪುಟ ಸಮಿತಿ ಸಭೆಯಲ್ಲಿ ಪಿಎಂ ಸ್ವನಿಧಿ ಯೋಜನೆಯನ್ನು 2024 ರವರೆಗೆ ಮುಂದುವರಿಸಲು ಅನುಮೋದನೆ ನೀಡಲಾಗಿದೆ. ಈ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಕಿರು ಸಾಲ ನೀಡಲಾಗುವುದು.
ಅಧಿಕೃತ ಹೇಳಿಕೆಯ ಪ್ರಕಾರ, ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮನಿರ್ಭರ್ ನಿಧಿ(ಪಿಎಂ ಸ್ವನಿಧಿ) ಯೋಜನೆಯನ್ನು ಡಿಸೆಂಬರ್ 2024 ರವರೆಗೆ ಮುಂದುವರಿಸಲು ಕೇಂದ್ರವು ಬುಧವಾರ ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಅನುಮೋದನೆ ನೀಡಿದ್ದು, ಪ್ರಧಾನಮಂತ್ರಿ ಸ್ವನಿಧಿ ಮೂಲಕ ಬೀದಿಬದಿ ವ್ಯಾಪಾರಿಗಳಿಗೆ ಕೈಗೆಟಕುವ ದರದಲ್ಲಿ ಮೇಲಾಧಾರ ರಹಿತ ಸಾಲವನ್ನು ನೀಡಲಾಗುತ್ತದೆ ಎಂದು ಹೇಳಿಕೆ ತಿಳಿಸಿದೆ.
ಸಾಲದ ಮೊತ್ತವನ್ನು 8,100 ಕೋಟಿ ರೂ.ಗೆ ಹೆಚ್ಚಿಸಿದೆ, ಆ ಮೂಲಕ ಬೀದಿ ವ್ಯಾಪಾರಿಗಳಿಗೆ ತಮ್ಮ ವ್ಯಾಪಾರವನ್ನು ಇನ್ನಷ್ಟು ವಿಸ್ತರಿಸಲು ಮತ್ತು ಅವರನ್ನು ಆತ್ಮನಿರ್ಭರ್ ಮಾಡಲು ದುಡಿಯುವ ಬಂಡವಾಳವನ್ನು ಒದಗಿಸಿದೆ ಎಂದು ಹೇಳಿಕೆ ತಿಳಿಸಿದೆ.
ಮಾರಾಟಗಾರರಿಗೆ ಕ್ಯಾಶ್ ಬ್ಯಾಕ್ ಸೇರಿದಂತೆ ಡಿಜಿಟಲ್ ಪಾವತಿಗಳ ಉತ್ತೇಜನಕ್ಕಾಗಿ ಬಜೆಟ್ ಅನ್ನು ಸಹ ಹೆಚ್ಚಿಸಲಾಗಿದೆ. ಈ ಅನುಮೋದನೆಯು ಭಾರತದ ನಗರ ಪ್ರದೇಶದ ಸುಮಾರು 1.2 ಕೋಟಿ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಕೇಂದ್ರ ಹೇಳಿದೆ.