ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆ ನೌಕರರು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆರನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಬೇಕು ಮತ್ತು ನೌಕರರ ವಿರುದ್ಧದ ಪ್ರಕರಣಗಳನ್ನು ಮುಂದಿನ ನಾಲ್ಕು ವಾರಗಳಲ್ಲಿ ಹಿಂಪಡೆಯಬೇಕು ಎಂದು ಒತ್ತಾಯಿಸಲಾಗಿದೆ.
ಬೇಡಿಕೆ ಈಡೇರದಿದ್ದರೆ ಮುಷ್ಕರ ಕೈಗೊಳ್ಳುವುದಾಗಿ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ರಾಜ್ಯ ಸಾರಿಗೆ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಬೇಕು. ಕೊರೊನಾದಿಂದ ಮೃತಪಟ್ಟ ಕುಟುಂಬದವರಿಗೆ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ. 2020ರ ನವೆಂಬರ್ ನಲ್ಲಿ ಮುಷ್ಕರ ಕೈಗೊಂಡಿದ್ದು, ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಆದರೆ ಇದುವರೆಗೂ ಬೇಡಿಕೆಗಳನ್ನು ಪೂರ್ಣವಾಗಿ ಈಡೇರಿಸದ ಹಿನ್ನೆಲೆಯಲ್ಲಿ ಮತ್ತೆ ಮುಷ್ಕರ ಕೈಗೊಳ್ಳಲು ತೀರ್ಮಾನಿಸಲಾಗಿದೆ.