ಇಂದು ಮುಂಬೈನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ, ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
ಲಕ್ನೋ ಸೂಪರ್ ಜೈಂಟ್ಸ್ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಇಂದಿನ ಪಂದ್ಯದಲ್ಲೂ ಗೆಲುವು ಸಾಧಿಸುವ ವಿಶ್ವಾಸದಲ್ಲಿದೆ.
ಪಂದ್ಯ ಇಂದು ಸಂಜೆ 7-30 ಕ್ಕೆ ಆರಂಭವಾಗಲಿದ್ದು, ಅದಕ್ಕೂ ಮುನ್ನವೇ ಲಕ್ನೋ ಸೂಪರ್ ಜೈಂಟ್ಸ್ ದೊಡ್ಡ ಶಾಕ್ ಎದುರಿಸಿದೆ.
ಲಕ್ನೋ ಸೂಪರ್ ಜೈಂಟ್ಸ್ ತಂಡದ ಸಿಇಓ ರಘು ಅಯ್ಯರ್, ಇಂದಿನ ಪಂದ್ಯಕ್ಕಾಗಿ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣಕ್ಕೆ ಆಗಮಿಸುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿದೆ ಎನ್ನಲಾಗಿದೆ. ಆಟಗಾರರಿದ್ದ ಬಸ್ ಹಿಂದೆಯೇ ಅವರ ಕಾರು ಬರುತ್ತಿತ್ತು ಎನ್ನಲಾಗಿದೆ.
ಅವರನ್ನು ಈಗ ಆಸ್ಪತ್ರೆಗೆ ದಾಖಸಲಾಗಿದೆ ಎಂದು ತಿಳಿದುಬಂದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ