ಬೆಂಗಳೂರು: ಪಿಎಸ್ಐ ಹುದ್ದೆ ಮರು ಪರೀಕ್ಷೆ ರದ್ದು ಮಾಡುವಂತೆ ಆಗ್ರಹಿಸಿ ಅಭ್ಯರ್ಥಿಗಳು ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಸರ್ಕಾರದ ನಿರ್ಧಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
545 ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮದ ಬೆನ್ನಲ್ಲೇ ರಾಜ್ಯ ಸರ್ಕಾರ ಆಯ್ಕೆ ಪಟ್ಟಿ ರದ್ದುಗೊಳಿಸಿ ಮರು ಪರೀಕ್ಷೆ ಘೋಷಿಸಿದ್ದು, ಇದರಿಂದ ಸಂಕಷ್ಟಕ್ಕೀಡಾಗಿರುವ ನೊಂದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿರುವ ಅಭ್ಯರ್ಥಿಗಳು ಮರು ಪರೀಕ್ಷೆ ಆದೇಶ ರದ್ದು ಮಾಡುವಂತೆ ಆಗ್ರಹಿಸಿದ್ದಾರೆ.
BIG BREAKING: ಬೆಂಗಳೂರಿನಲ್ಲಿ ಮತ್ತೊಂದು ಹೇಯ ಕೃತ್ಯ; ಮಧ್ಯಪಾನ ಮಾಡಿಸಿ ಮಹಿಳೆಯ ಮೇಲೆ ಅತ್ಯಾಚಾರ
ನಾವು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದು, ಮರು ಪರೀಕ್ಷೆಯಿಂದಾಗಿ ನಮಗೆ ಅನ್ಯಾಯವಾಗುತ್ತಿದೆ. ಮೂರು ವರ್ಷಗಳ ಕಾಲ ಸತತ ಓದಿ ಪರೀಕ್ಷೆ ಬರೆದ ನಮಗೆ ಅನ್ಯಾಯವಾಗಿದ್ದು ಈಗ ಆಯ್ಕೆಪಟ್ಟಿ ರದ್ದುಪಡಿಸಿ ಹೊಸದಾಗಿ ಪರೀಕ್ಷೆ ಬರೆಯಲು ಹೇಳುತ್ತಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಅದನ್ನು ಬಿಟ್ಟು ಪರೀಕ್ಷೆಯನ್ನು ಏಕಾಏಕಿ ರದ್ದು ಮಾಡಿ ಮೂರು ತಿಂಗಳಲ್ಲಿ ಮರು ಪರೀಕ್ಷೆಗೆ ಹಾಜರಾಗಿ ಎಂದರೆ ನಮ್ಮ ಭವಿಷ್ಯವೇ ಕತ್ತಲಾಗುತ್ತದೆ. ಬಡ, ಪ್ರಾಮಾಣಿಕ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ಪ್ರತಿಭಟನಾಕಾರರು ಕಣ್ಣೀರಿಟ್ಟಿದ್ದಾರೆ.