ಬೆಂಗಳೂರು: ಪಿಎಸ್ಐ ನೇಮಕಾತಿ ಹುದ್ದೆ ಮರು ಪರೀಕ್ಷೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಮರು ಪರೀಕ್ಷೆಯಿಂದ ಫೇಲ್ ಆದವರಿಗೂ ಅವಕಾಶ ಸಿಗುತ್ತೆ. ಪರೀಕ್ಷೆ ಮಾತ್ರ ಇರುತ್ತೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಇರಲ್ಲ. ಎಲ್ಲರೂ ಸಹ ಆತ್ಮವಿಶ್ವಾಸದಿಂದ ಪಿಎಸ್ಐ ಪರೀಕ್ಷೆ ಬರೆಯಲಿ ಎಂದು ಹೇಳಿದ್ದಾರೆ.
BIG NEWS: ಮರು ಪರೀಕ್ಷೆ ರದ್ದು ಮಾಡುವಂತೆ ಆಗ್ರಹ; PSI ಅಭ್ಯರ್ಥಿಗಳಿಂದ ಉಪವಾಸ ಸತ್ಯಾಗ್ರಹ
545 ಪಿಎಸ್ಐ ಹುದ್ದೆ ನೇಮಕಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಆಯ್ಕೆ ಪಟ್ಟಿ ರದ್ದುಗೊಳಿಸಿರುವ ರಾಜ್ಯ ಸರ್ಕಾರ ಮರು ಪರೀಕ್ಷೆಗೆ ಆದೇಶ ನೀಡಿದೆ. ಮರು ಪರೀಕ್ಷೆಯಿಂದ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗುತ್ತದೆ, ಸರ್ಕಾರದ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.