ಕಲ್ಬುರ್ಗಿ: 545 ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ನಡೆದಿದ್ದ ಶಾಲೆಯ ಪ್ರಾಂಶುಪಾಲ ಕಾಶಿನಾಥ್ ಸಿಐಡಿಗೆ ಶರಣಾಗಿದ್ದಾರೆ.
ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಶಾಲೆಯ ಪ್ರಾಂಶುಪಾಲ ಕಾಶಿನಾಥ್ ಪ್ರಕರಣ ದಾಖಲಾದ ನಂತರ ತಲೆಮರೆಸಿಕೊಂಡಿದ್ದರು. ಇಂದು ಅವರು ಸಿಐಡಿ ಮುಂದೆ ಶರಣಾಗಿದ್ದಾರೆ. ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆಯಷ್ಟೇ ಪ್ರಕರಣದ ಕಿಂಗ್ ಪಿನ್ ಮಂಜುನಾಥ ಮೇಳಕುಂದಿ ಸಿಐಡಿ ಮುಂದೆ ಶರಣಾಗಿದ್ದರು.