ಬಾಗಲಕೋಟೆ: ಹುಟ್ಟುತ್ತಾ ಅಣ್ಣತಮ್ಮಂದಿರು, ಬೆಳೆಯುತ್ತಾ ದಾಯಾದಿಗಳು ಎಂಬ ಮಾತಿಗೆ ಈ ಘಟನೆ ಸಾಕ್ಷಿ ಎಂಬಂತಿದೆ. ಆಸ್ತಿ ವಿಚಾರಕ್ಕೆ ಸಹೋದರರಿಬ್ಬರು ಸಹೋದರಿಯ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಅಮೀನಗಢ ಪಟ್ಟಣದಲ್ಲಿ ನಡೆದಿದೆ.
ಕವಿತಾ ಹಿರೇಮಠ ಎಂಬುವವರ ಕುತ್ತಿಗೆಗೆ ಸಹೋದರರಾದ ಚಂದ್ರಶೇಖರ್ ಹಾಗೂ ಕುಮಾರಸ್ವಾಮಿ ಹಿರೇಮಠ ಎಂಬುವವರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಕವಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.