ಕೊಪ್ಪಳ: ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಭರ್ಜರಿ ಸಿದ್ಧತೆ ಆರಂಭಿಸಿರುವ ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ಮತಬೇಟೆಗಾಗಿ ಇನ್ನಿಲ್ಲದ ಕಸರತ್ತು ನಡೆಸಿವೆ. ಇದೀಗ ಹನುಮ ಜನ್ಮಭೂಮಿ ಅಂಜನಾದ್ರಿ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದೆ.
ಆಗಸ್ಟ್ ತಿಂಗಳಲ್ಲಿ ನಡೆಯಲಿರುವ ಸಂತ ಸಮ್ಮೇಳನಕ್ಕೆ ಕಾಂಗ್ರೆಸ್ ನ ಹಿರಿಯ ನಾಯಕರಿಗೆ ಅಂಜನಾದ್ರಿ ಬೆಟ್ಟದ ಅರ್ಚಕ ವಿದ್ಯಾದಾಸ್ ಬಾಬಾ ಆಹ್ವಾನ ನೀಡಿದ್ದಾರೆ. ಸ್ಥಳೀಯ ಮುಖಂಡರ ಮನವಿ ಮೇರೆಗೆ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಲಾಗಿದೆ.
Big Breaking: ಕಡ್ಡಾಯ ಕೊರೊನಾ ಲಸಿಕೆ ಕುರಿತು ʼಸುಪ್ರೀಂʼ ಮಹತ್ವದ ಆದೇಶ; ವ್ಯಾಕ್ಸಿನೇಶನ್ ಗೆ ಬಲವಂತ ಸಲ್ಲದು ಎಂದ ನ್ಯಾಯಾಲಯ
ಸ್ಥಳೀಯ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಹನುಮಮಾಲೆ ಧರಿಸಿದ್ದರು. ಇದೀಗ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಸಂತ ಸಮ್ಮೇಳನಕ್ಕೆ ಆಹ್ವಾನಿಸಲಾಗಿದೆ. ಈಗಾಗಲೇ ಬಿಜೆಪಿ ನಾಯಕರಿಂದ ಹನುಮ ಜಪ ಆರಂಭವಾಗಿದ್ದು, ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕರಿಂದಲೂ ಆಂಜನೇಯನ ಜಪ ಆರಂಭವಾಗಿದೆ.