alex Certify PSI ನೇಮಕಾತಿ ಅಕ್ರಮದ ರಹಸ್ಯ ಬಯಲು: HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

PSI ನೇಮಕಾತಿ ಅಕ್ರಮದ ರಹಸ್ಯ ಬಯಲು: HDK

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ನನ್ನದೇ ಆದ ಮೂಲಗಳ ಪ್ರಕಾರ ಮಾಹಿತಿ ಸಂಗ್ರಹಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ಮಾತನಾಡಿದ ಅವರು, ಇನ್ನು ಎರಡು-ಮೂರು ದಿನಗಳಲ್ಲಿ ಮಾಹಿತಿಯನ್ನು ಬಿಚ್ಚಿಡುತ್ತೇನೆ. ನಾನು ಯಾರನ್ನೂ ಟಾರ್ಗೆಟ್ ಮಾಡಲ್ಲ ಎಂದು ಹೇಳಿದ್ದಾರೆ.

ಪಿಎಸ್ಐ ನೇಮಕಾತಿ ಅಕ್ರಮ ಕೇವಲ ಕಲಬುರ್ಗಿಗೆ ಸೀಮಿತವಾಗಿಲ್ಲ. ಬೆಂಗಳೂರಿನಲ್ಲಿಯೂ ಅಕ್ರಮಕ್ಕೆ ದಾರಿ ಮಾಡಿದ್ದಾರೆ ಎಂದು ಮಾಹಿತಿ ಇದೆ. ದೊಡ್ಡ ಅಧಿಕಾರಿಗಳು ಉತ್ತೇಜನ ನೀಡಿದ್ದಾರೆ ಎನ್ನುವ ಮಾಹಿತಿ ಇದೆ. ಈ ಕುರಿತು ನಾನು ಎಲ್ಲ ರೀತಿಯಲ್ಲಿಯೂ ಮಾಹಿತಿ ಕಲೆ ಹಾಕುತ್ತಿದ್ದೇನೆ. ಎರಡು ಮೂರು ದಿನದಲ್ಲಿ ಎಲ್ಲಾ ಮಾಹಿತಿಯನ್ನು ಬಿಚ್ಚಿಡುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...