ಅಮರಾವತಿ: ಪ್ರತಿವರ್ಷ ಬಸವ ಜಯಂತಿ ಆಚರಣೆಗೆ ಆಂಧ್ರಪ್ರದೇಶ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಪ್ರತಿವರ್ಷ ಮೇ 3 ರಂದು ಆಂಧ್ರಪ್ರದೇಶ ಸರ್ಕಾರದ ವತಿಯಿಂದ ರಾಜ್ಯಾದ್ಯಂತ ಬಸವೇಶ್ವರ ಜಯಂತಿ ಆಚರಿಸಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಎಲ್ಲಾ ಸಚಿವಾಲಯಗಳಲ್ಲಿ ಬಸವೇಶ್ವರರ ಜಯಂತಿ ಆಚರಿಸಬೇಕು ಎಂದು ಸೂಚನೆ ನೀಡಲಾಗಿದೆ. ಈ ಕುರಿತಾಗಿ ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ ಆಂಧ್ರಪ್ರದೇಶ ಸರ್ಕಾರಕ್ಕೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಪ್ರತಿ ವರ್ಷ ಮೇ 3ರಂದು ಬಸವೇಶ್ವರ ಜಯಂತಿ ಆಚರಿಸಲು ಆಂಧ್ರಪ್ರದೇಶ ಸರ್ಕಾರ ನಿರ್ಧರಿಸಿದ್ದು, ಅಧಿಕೃತ ಆದೇಶ ಹೊರಡಿಸಿದೆ.