ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಿದೆ. ಮೇ 12 ರಂದು ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲು ಪ್ರೌಢಶಿಕ್ಷಣ ಮಂಡಳಿ ಯೋಜಿಸಿತ್ತು.
ಮೌಲ್ಯಮಾಪನ ಕಾರ್ಯ ಕೊಂಚ ವಿಳಂಬವಾದ ಹಿನ್ನೆಲೆಯಲ್ಲಿ ಮೇ 15 ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು. ಮೇ 5 ರ ವೇಳೆಗೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ. ನಂತರ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡು ಮೇ 15ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.