ವೇಶ್ಯಾವಾಟಿಕೆ ಕೇಂದ್ರಗಳ ಮೇಲೆ ದಾಳಿ ಮಾಡಿದ ವೇಳೆ ಅವರೊಂದಿಗಿರುವ ಗ್ರಾಹಕರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಪ್ರಕರಣವೊಂದರ ವಿಚಾರಣೆ ವೇಳೆ ಈ ಕುರಿತ ತೀರ್ಪು ಹೊರಬಿದ್ದಿದ್ದು, ಇದೇ ವೇಳೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸಹ ಆಂಧ್ರಪ್ರದೇಶ ಹೈಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.
ಪ್ರಕರಣದ ವಿವರ: 2020ರಲ್ಲಿ ನಾಗರಂಪಳಂ ಪೊಲೀಸರು ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿದಾಗ ಕುಮಾರ್ ಎಂಬವರು ಸಿಕ್ಕಿಬಿದ್ದಿದ್ದರು.
ಅವರ ವಿರುದ್ಧ ವಿಚಾರಣೆ ಹಾಗೂ ಕಾನೂನು ಕ್ರಮಕ್ಕೆ ಅಧೀನ ನ್ಯಾಯಾಲಯ ಮುಂದಾದ ವೇಳೆ ಇದನ್ನು ಪ್ರಶ್ನಿಸಿ ಕುಮಾರ್, ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಈ ಕುರಿತ ತೀರ್ಪು ಹೊರಬಿದ್ದಿದೆ.