ಬೆಂಗಳೂರು: 545 ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ನೇಮಕಾತಿ ವಿಭಾಗದ ಎಲ್ಲಾ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಪಿ ಎಸ್ ಐ ಹುದ್ದೆಯಲ್ಲಿ ಅಕ್ರಮ ಬಯಲಾಗುತ್ತಿದ್ದಂತೆ ಈ ತೀರ್ಮಾನಕ್ಕೆ ರಾಜ್ಯ ಸರ್ಕಾರ ಬಂದಿದೆ. ನೇಮಕಾತಿ ವಿಭಾಗದಲ್ಲಿ ಸುಮಾರು 40 ಸಿಬ್ಬಂದಿಗಳು ಇದ್ದು, ಹಂತ ಹಂತವಾಗಿ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲು ತೀರ್ಮಾನಿಸಲಾಗಿದೆ.
ಈಗಾಗಲೇ ನೇಮಕಾತಿ ವಿಭಾಗದ ಎಡಿಜಿಪಿ ಹಾಗೂ ಡಿವೈ ಎಸ್ ಪಿ ವರ್ಗಾವಣೆ ಮಾಡಲಾಗಿದ್ದು, ಉಳಿದ ಸಿಬ್ಬಂದಿಗಳನ್ನು ಶೀಘ್ರದಲ್ಲಿ ವರ್ಗಾವಣೆ ಮಾಡಲು ಯೋಜನೆ ರೂಪಿಸಿದೆ.