alex Certify BIG NEWS: ಕೋವಿಡ್ ಸಾವಿನಲ್ಲಿ ಕೇಂದ್ರದ ಸುಳ್ಳು ಲೆಕ್ಕ WHO ವರದಿಯಲ್ಲಿ ಬಯಲು; 4.8 ಲಕ್ಷ ಜನರು ಬಲಿ ಎಂದು ಜಗತ್ತಿನ ಕಣ್ಣಿಗೆ ಮಣ್ಣೆರಚಿದ ಪ್ರಧಾನಿ ಮೋದಿ; ದಿನೇಶ್ ಗುಂಡೂರಾವ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಸಾವಿನಲ್ಲಿ ಕೇಂದ್ರದ ಸುಳ್ಳು ಲೆಕ್ಕ WHO ವರದಿಯಲ್ಲಿ ಬಯಲು; 4.8 ಲಕ್ಷ ಜನರು ಬಲಿ ಎಂದು ಜಗತ್ತಿನ ಕಣ್ಣಿಗೆ ಮಣ್ಣೆರಚಿದ ಪ್ರಧಾನಿ ಮೋದಿ; ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ಕೋವಿಡ್ ಸಾವಿನಲ್ಲಿ ಸುಳ್ಳು ಲೆಕ್ಕ ಹೇಳಿ ಜಗತ್ತಿನ ಕಣ್ಣಿಗೆ ಮಣ್ಣೆರೆಚಿದ್ದ ಕೇಂದ್ರದ ಸುಳ್ಳಿನ ಬಂಡವಾಳ WHO ವರದಿಯಿಂದ ಬಯಲಾಗಿದೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್‌ಗೆ 2020-21ರಲ್ಲಿ ಭಾರತವೊಂದರಲ್ಲೇ 47 ಲಕ್ಷ ಜನ ಮೃತಪಟ್ಟಿದ್ದಾರೆ‌. ಆದರೆ ವಿಶ್ವದ ಮುಂದೆ ಮಾನ ಮುಚ್ಚಿಕೊಳ್ಳಲು ಮೋದಿ ಸರ್ಕಾರ ಸತ್ತವರ ಸಂಖ್ಯೆ ಕೇವಲ 4.8ಲಕ್ಷ ಎಂದು ಹೇಳಿ ಜನರ ದಾರಿ ತಪ್ಪಿಸಿತ್ತು ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

2ನೇ ಅಲೆಯಲ್ಲಿ ಭಾರತ ಸಾವಿನ ಮನೆಯಾಗಿತ್ತು. ಗಂಗೆಯಲ್ಲಿ ಶವಗಳು ತೇಲಿದ್ದವು, ಆಕ್ಸಿಜನ್ ಇಲ್ಲದೆ ಸಾಲು ಸಾಲು ಹೆಣಗಳು ಬಿದ್ದವು. ಜನ ದೀಪದ ಹುಳುಗಳಂತೆ ಸಾಯುತ್ತಿದ್ದರೂ ಮೋದಿಯವರು ದೇಶ ಕೊರೋನಾ ಗೆದ್ದಿದೆ ಎಂದು ಬಿಟ್ಟಿ ಪ್ರಚಾರ ಗಿಟ್ಟಿಸಿಕೊಂಡರು. ಈ ಮೂಲಕ ಸಾವಿನ ಲೆಕ್ಕದ ಸತ್ಯ ಮರೆಮಾಚಿದ್ದರು. ಈಗ WHO ವರದಿ ಸರ್ಕಾರದ ಸತ್ಯ ದರ್ಶನ ಮಾಡಿದೆ ಎಂದು ಹೇಳಿದ್ದಾರೆ.

ಕೋವಿಡ್ ಸಾವಿನ ಸುಳ್ಳು ಲೆಕ್ಕ ಹೇಳಿದ ಮೋದಿ ಸರ್ಕಾರಕ್ಕೆ ಸತ್ತವರ ಮನೆಯ ಶಾಪ ತಟ್ಟದೇ ಇರದು. ಸುಳ್ಳು ಹೇಳಿ ಸತ್ಯವನ್ನು ಬಹಳ ದಿನ ಅದುಮಿಡಲು ಸಾಧ್ಯವಿಲ್ಲ ಎಂಬುದು WHO ವರದಿಯಿಂದ ಸಾಬೀತಾಗಿದೆ. ಕೋವಿಡ್ ಕಾಲದಲ್ಲಿ ಕೇಂದ್ರದ ನಿರ್ಲಕ್ಷ್ಯ, ಮೋದಿಯವರ ಬಿಟ್ಟಿ ಪ್ರಚಾರದ ಹುಚ್ಚು 47 ಲಕ್ಷ ಜನರ ಸಾವಿಗೆ ಕಾರಣ. ಈ ಸಾವುಗಳಿಗೆ ಕೇಂದ್ರವೇ ಹೊಣೆ ಎಂದು ಗುಡುಗಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...