ರಾಮನಗರ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೆಮ್ಮಾಳೆ ಗೇಟ್ ಸಮೀಪ ಘಟನೆ ನಡೆದಿದೆ.
ಇನೋವಾ ಕಾರು ಚಾಲಕ ಉಮೇಶ್(24), ಅಕ್ಷತಾ(28) ಹಾಗೂ ಅಕ್ಷತಾ ಅವರ 6 ತಿಂಗಳ ಮಗ ಸುಮಂತ್ ಮೃತಪಟ್ಟವರು ಎಂದು ಹೇಳಲಾಗಿದೆ. ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ಈ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.